Skip to product information
1 of 1

Saroja Prakasha

ಚಿಲಿಯ ಕಲಿಗಳು

ಚಿಲಿಯ ಕಲಿಗಳು

Publisher - ಭೂಮಿ ಬುಕ್ಸ್

Regular price Rs. 125.00
Regular price Rs. 125.00 Sale price Rs. 125.00
Sale Sold out
Shipping calculated at checkout.

- Free Shipping above ₹200

- Cash on Delivery (COD) Available

Pages -

Type -

ಪಾತಾಳಕ್ಕೆ ರಾಕೆಟ್!

ಏಳುನೂರು ಮೀಟರ್ ಆಳದಲ್ಲಿ 33 ಗಣಿಗಾರರು ಸಿಕ್ಕಿಹಾಕಿಕೊಂಡಿದ್ದಾರೆ. ಹದಿನೇಳು ದಿನ ಶ್ರಮಿಸಿ 3 ಅಂಗುಲ ಬೋರ್ ರಂಧ್ರ ಕೊರೆದು ನೋಡಿದರೆ ಅವರೆಲ್ಲ ಬದುಕಿರುವುದು ಗೊತ್ತಾಗಿದೆ. ಇನ್ನೂ ದೊಡ್ಡ ರಂಧ್ರ ಕೊರೆದು ಅವರನ್ನು ಮೇಲಕ್ಕೆತ್ತಲು ನಾಲ್ಕು ತಿಂಗಳೇ ಬೇಕು. ಅದುವರೆಗೆ ಆ ಮುಷ್ಟಿಗಾತ್ರದ ರಂಧ್ರದ ಮೂಲಕ ಅವರಿಗೆ ಆಹಾರ ಔಷಧ ರವಾನಿಸಬೇಕು; ಅವರನ್ನು ಮೇಲಕ್ಕೆತ್ತಲು ರಾಕೆಟ್ ಮಾದರಿಯ ಲಿಫ್ಟ್‌ ನಿರ್ಮಿಸಬೇಕು.

2010ರ ಅಕ್ಟೋಬರ್‌ನಲ್ಲಿ ಚಿಲಿ ಎಂಬ ಪುಟ್ಟ ದೇಶ ಎಲ್ಲರನ್ನೂ ಸುರಕ್ಷಿತ ಮೇಲೆತ್ತಿದಾಗ ಆ ಮಹಾಸಾಹಸದ ವೀಕ್ಷಣೆಗೆ 3000 ವರದಿಗಾರರು ಸೇರಿದ್ದರು. ನೂರು ಕೋಟಿಗೂ ಹೆಚ್ಚು ಜನರು ನೇರ ಪ್ರಸಾರದಲ್ಲಿ ಅದನ್ನು ಕಣ್ಣಾರೆ ನೋಡಿದರು. ಸಾಮಾನ್ಯ ಪ್ರಜೆಗಳ ಈ ಅಸಾಮಾನ್ಯ ಸಾಧನೆ 'ಮನುಕುಲಕ್ಕೇ ಸ್ಫೂರ್ತಿದಾಯಕ ಸಾಧನೆ' ಎಂಬ ಶ್ಲಾಘನೆಗೆ ಪಾತ್ರವಾಯಿತು.

ಕಲ್ಪನೆಗೂ ಮೀರಿದ ಈ ನೈಜಕತೆಯನ್ನು ಡ್ರಿಲ್ಲರ್ ಶೈಲಿಯಲ್ಲಿ ಬರೆದ ಸರೋಜಾ ಪ್ರಕಾಶ್‌ ಭೌತವಿಜ್ಞಾನದ ಉಪನ್ಯಾಸಕಿ ಯಾಗಿದ್ದವರು. ವಿಜ್ಞಾನವನ್ನು ಎಲ್ಲರಿಗೂ ಅರ್ಥವಾಗುವಂತೆ ಬರೆಯುವ ಇವರು ಚಿಲಿ ಸಾಹಸದ ಕಥೆಯನ್ನು ಎಲ್ಲರಿಗೂ ಇಷ್ಟವಾಗುವಂತೆ ಬರೆದಿದ್ದಾರೆ. ಈ ಅಪೂರ್ವ ಘಟನೆ ಇಂಗ್ಲಿಷ್‌ನಲ್ಲಿ ಕಾದಂಬರಿಯಾಗಿಯೊ, ಸಿನೆಮಾ ಆಗಿಯೊ ಬರುವ ಮೊದಲೇ ಕನ್ನಡ ಸಾಹಿತ್ಯಕ್ಕೆ ಸೇರ್ಪಡೆಯಾಗುತ್ತಿದೆ. ಅದು ಹೆಮ್ಮೆಯ ದಾಖಲೆ.

• ನಾಗೇಶ ಹೆಗಡೆ
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)