Jogi
ಇವರು ಅವರು ದೇವರು
ಇವರು ಅವರು ದೇವರು
Publisher -
- Free Shipping Above ₹250
- Cash on Delivery (COD) Available
Pages -
Type -
Couldn't load pickup availability
ಜೋಗಿ ಎಂಬ ಹೆಸರಿನಿಂದ ಜನಪ್ರಿಯರಾಗಿರುವವರು ಲೇಖಕ ಗಿರೀಶ್ ರಾವ್ ಹತ್ವಾರ್. ಇವರು ಕನ್ನಡದ ಹೊಸಕಾಲದ ಪ್ರಮುಖ ಲೇಖಕರಲ್ಲೊಬ್ಬರಾಗಿದ್ದು ಹಲವಾರು ಕತೆ, ಕಾದಂಬರಿಗಳನ್ನು ರಚಿಸಿದ್ದಾರೆ. ಹಲವು ಪತ್ರಿಕೆಗಳಲ್ಲಿ ಅಂಕಣ ಬರಹಗಳಿಂದಲೂ ಪ್ರಸಿದ್ಧಿಯಾಗಿದ್ದಾರೆ. ಧಾರಾವಾಹಿ, ಸಿನೆಮಾಗಳ ಗೀತಸಾಹಿತ್ಯ, ಚಿತ್ರಕಥೆ ಸಂಭಾಷಣೆ ರಚನೆಯಲ್ಲೂ ತೊಡಗಿಕೊಂಡಿದ್ದಾರೆ. ವೃತ್ತಿಯಿಂದ ಪತ್ರಕರ್ತರಾಗಿದ್ದು ಪ್ರಸ್ತುತ ಪುರವಣಿ ಸಂಪಾದಕರಾಗಿದ್ದಾರೆ.
ಹುಟ್ಟೂರು ಮಂಗಳೂನ ಸುರತ್ಕಲ್ಸಮೀಪದಲ್ಲಿರುವ ಹೊಸಬೆಟ್ಟು. ಹತ್ವಾರ್ ಮನೆತನಕ್ಕೆ ಸೇರಿದ ಜೋಗಿ ಓದಿದ್ದು ಗುರುವಾಯನಕೆರೆ ಮತ್ತು ಉಪ್ಪಿನಂಗಡಿಗಳಲ್ಲಿ. ತಂದೆ ಶ್ರೀಧರರಾವ್ ಕೃಷಿಕರು. ತಾಯಿ ಶಾರದೆ. ಹಿರಿಯ ಸೋದರ ಹತ್ವಾರ ನಾರಾಯಣ ರಾವ್ ಯಕ್ಷಗಾನ ಪ್ರಸಂಗಗಳನ್ನು ಬರೆದು, ತಾಳಮದ್ದಲೆ ಅರ್ಥಧಾರಿಯಾಗಿ, ಲೇಖಕರಾಗಿ ಪ್ರಸಿದ್ಧರು. ೧೮ನೇ ವಯಸ್ಸಿಗೆ ಬರಹ ಆರಂಭಿಸಿದ ಜೋಗಿ ಓದಿದ್ದು ಬಿ.ಕಾಂ. ಕಾಲೇಜು ದಿನಗಳಲ್ಲಿ ಅವರ ಸಾಹಿತ್ಯ ಆಸಕ್ತಿಯನ್ನು ರೂಪಿಸಿದವರು ಬಳ್ಳ ವೆಂಕಟರಮಣ. ಬೆಂಗಳೂರಿಗೆ ೧೯೮೯ರಲ್ಲಿ ಕಾಲಿಟ್ಟ ಗಿರೀಶ ರಾವ್ ಹತ್ವಾರ್ ಅವರನ್ನು ಜೋಗಿಯಾಗಿ ರೂಪಿಸಿದವರು ವೈಎನ್ ಕೆ. ಸದ್ಯ ಬೆಂಗಳೂರಲ್ಲಿ ನೆಲೆನಿಂತಿರುವ ಜೋಗಿ ಪತ್ನಿ ಜ್ಯೋತಿ, ಮಗಳು ಖುಷಿಯೊಂದಿಗೆ ಜೀವಿಸುತ್ತಿದ್ದಾರೆ.
Share

Subscribe to our emails
Subscribe to our mailing list for insider news, product launches, and more.