Skip to product information
1 of 1

Dr. D. N. Shankara Batt

ಕನ್ನಡ ನುಡಿಯರಿಮೆಯ ಇಣುಕುನೋಟ

ಕನ್ನಡ ನುಡಿಯರಿಮೆಯ ಇಣುಕುನೋಟ

Publisher - ಡಿ. ಎನ್. ಶಂಕರ ಬಟ್

Regular price Rs. 100.00
Regular price Rs. 100.00 Sale price Rs. 100.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages -

Type -

ಒಂದಲ್ಲ ಒಂದು ಬಗೆಯ ಸಾಹಿತ್ಯಕ್ಕಾಗಿ ಮಾತ್ರ ಬಳಸಲಾಗುತ್ತಿದ್ದ ಕನ್ನಡವಿಂದು ಹಿಂದೆಂದೂ ಇಡದ ಹೆಜ್ಜೆಯನ್ನು ಇಡಬೇಕಿದೆ. ಕವಿತೆ, ನಾಟಕ, ಕಾದಂಬರಿ ಮುಂತಾದವುಗಳನ್ನು ಬರೆಯುವವರು ಮಾತ್ರ ಬಳಸುತ್ತಿದ್ದ ಕನ್ನಡವನ್ನು ಇಂದು ಇವಾವುದರ ಗಂಧವೂ ಇಲ್ಲದ ಅರಿಗರು,ಇಂಜಿನಿಯರುಗಳು, ಡಾಕ್ಟರುಗಳು, ಮುಂತಾದವರು ತಂತಮ್ಮ ಕೆಲಸಗಳಿಗೆ ಚೆನ್ನಾಗಿ ಬಳಸಿಕೊಂಡು ಕನ್ನಡವನ್ನು ಜಪಾನೀಸ್, ಕೊರಿಯನ್, ಜರ್ಮನ್, ಹೀಬ್ರೂ, ಮುಂತಾದ ನುಡಿಗಳ ಸಾಲಿನಲ್ಲಿ ನಿಲ್ಲಿಸಬೇಕಿದೆ.
ಆದರೆ ಹಿಂದೆಯೂ ಆಗಿರುವಂತೆ, ಬರವಣಿಗೆಯ ಇಟ್ಟಳದಲ್ಲಾಗುತ್ತಿರುವ ಈ ಬೆಳವಣಿಗೆಯು ಬರಿಗೆಮಣೆ, ಪದಬಳಕೆ ಮತ್ತು ಬರವಣಿಗೆಯ ಒಡ್ಡವದಲ್ಲಿಯೂ ಮಾರ್ಪಾಡುಗಳನ್ನು ಚಿಗುರಿಸುತ್ತಿದೆ. ಒಟ್ಟಾರೆಯಾಗಿ ಹೇಳುವುದಾದರೆ, ಈ ಮಾರ್ಪಾಡುಗಳಿಂದ ಈಗ ‘ಎಲ್ಲರ ಕನ್ನಡ’ವೊಂದು ರೂಪುಗೊಳ್ಳುತ್ತಿದೆ. ‘ಎಲ್ಲರ ಕನ್ನಡ’ವೆಂದರೆ ನಿಜಕ್ಕೂ ಎಲ್ಲರದಾಗಿದ್ದು ಆದಷ್ಟು ಕನ್ನಡದ ಪದಗಳನ್ನೇ ಬಳಸಲಾಗುತ್ತದೆ, ಹೊಸ ಪದಗಳನ್ನು ಕನ್ನಡದಲ್ಲೇ ಕಟ್ಟಲಾಗುತ್ತದೆ. ಕನ್ನಡವನ್ನು ಮುಂಬೊತ್ತಿಗೆ ಸಜ್ಜಾಗಿಸುವ ಹೊಣೆ ಎಲ್ಲರದೂ ಆಗಿದೆಯೆಂದು ಕಂಡುಕೊಂಡರೆ ಈ ಮಾರ್ಪಾಡುಗಳು ಏತಕ್ಕೆ ಬೇಕೆಂದು ತಾನಾಗಿಯೇ ತಿಳಿದು ಬರುತ್ತದೆ.
ಹೀಗೆ ಕನ್ನಡವನ್ನು ನಾಳೆಗೆ ಸಜ್ಜುಗೊಳಿಸಬೇಕಿರುವಾಗ, ನಿಜಕ್ಕೂ ಕನ್ನಡವೆಂದರೆ ಏನು? ಇದರ ಸೊಗಡೇನು? ನುಡಿಯೊಂದರ ಹರವು ಏನು? ಕಸುವು ಏನು? ಮಾತು ಹೇಗೆ ಬದಲಾಗುತ್ತದೆ? ಇದರ ಸೊಲ್ಲರಿಮೆಯೇನು? ಎಂಬುದರ ಬಗ್ಗೆ ಕನ್ನಡಿಗರಲ್ಲಿ ಅರಿವುಂಟಾಗುವುದು ಕನ್ನಡಿಗರ ನಾಳೆಗಳ ಹಿನ್ನೆಲೆಯಲ್ಲಿ ತುಂಬಾ ಬೇಕಾದುದಾಗಿದೆ. ಈ ನಿಟ್ಟಿನಲ್ಲಿ ಬೆಳಕು ಚೆಲ್ಲುವ ಬರಹಗಳನ್ನು ಈ ಹೊತ್ತಗೆಯಲ್ಲಿ ಕೊಡಮಾಡಲಾಗಿದೆ.

View full details