Skip to product information
1 of 1

M. R. Manikant

ಮತ್ತೆ ಹಾಡಿತು ಕೋಗಿಲೆ

ಮತ್ತೆ ಹಾಡಿತು ಕೋಗಿಲೆ

Publisher - ನೀಲೀಮ ಪಬ್ಲಿಕೇಷನ್ಸ್

Regular price Rs. 160.00
Regular price Rs. 160.00 Sale price Rs. 160.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages -

Type -

ಕೋಗಿಲೆ, ಮೊಟ್ಟೆಗೆ ಕಾವು ಕೊಟ್ಟು ಮರಿ ಮಾಡುವುದಿಲ್ಲ. ಕಾಗೆ ಇಲ್ಲದ ಸಂದರ್ಭವನ್ನು ನೋಡಿಕೊಂಡು ಅದರ ಗೂಡಲ್ಲಿ ಮೊಟ್ಟೆಯಿಟ್ಟು ಬಂದುಬಿಡುತ್ತದೆ. ಈ ಕಪಟ ಗೊತ್ತಿಲ್ಲದ ಕಾಗೆ, ಕೋಗಿಲೆಯ ಮೊಟ್ಟೆಗೂ ಕಾವು ಕೊಟ್ಟು ಮರಿ ಮಾಡಿ ಅದನ್ನು ಸಾಕುತ್ತದೆ. ಮುಂದೆ ಸತ್ಯ ಗೊತ್ತಾದಾಗ, ಕೋಗಿಲೆಯ ಮರಿಯನ್ನು ಗೂಡಿಂದ ಆಚೆ ತಳ್ಳುತ್ತದೆ. ಇದು ನಮಗೆಲ್ಲಾ ಗೊತ್ತಿರುವ ಪ್ರಕೃತಿ ರಹಸ್ಯ, ಕಣ್ಣೆದುರಿನ ವಾಸ್ತವ

ಹೀಗೆ ದಿಢೀರನೆ ಬೀದಿಗೆ ಬೀಳುತ್ತದಲ್ಲ, ಅದು ಕೋಗಿಲೆಯ ಬದುಕಿನ ಮೊದಲ ಸೋಲು, ನಂತರದ ಅದೆಷ್ಟೋ ದಿನಗಳನ್ನು ತಬ್ಬಲಿತನ, ಅಸಹಾಯಕತೆ, ಅನಾಥಭಾವ, ಕಷ್ಟ, ಕಣ್ಣೀರು, ನೋವು, ನಿಟ್ಟುಸಿರಿನ ಜೊತೆಗೇ ಕಳೆಯುವ ಕೋಗಿಲೆಯ ಬದುಕಲ್ಲಿ ಕಡೆಗೂ 'ಬಂಗಾರದ ಕ್ಷಣವೊಂದು' ಬಂದುಬಿಡುತ್ತದೆ. ಮಾಮರದಲ್ಲಿ ಚಿಗುರು ಕಾಣಿಸಿದ ಕ್ಷಣದಿಂದಲೇ ಕೋಗಿಲೆಯ ಕೊರಳು ಸಂಗೀತದ ಆಲಯವಾಗುತ್ತದೆ, ಕುಹೂ ಕುಹೂ ದನಿಯಲ್ಲಿ ಸಪ್ತಸ್ವರ ಕೇಳಿಸುತ್ತದೆ. ಆ ಸುಮಧುರ ದನಿಗೆ ಜಗತ್ತು ತಲೆದೂಗುತ್ತದೆ. ಕುಣಿದು, ನಲಿದು, ಮಣಿದು ಕೃತಜ್ಞತೆ ಸಲ್ಲಿಸುತ್ತದೆ. ನಿರಂತರ ಪರಿಶ್ರಮ ಮತ್ತು ಹೋರಾಟಕ್ಕೆ ಬಳುವಳಿಯಾಗಿ ದೊರೆಯುವ ಗೆಲುವು ಎಂಬ ಅಮೃತ ಸಿಂಚನಕ್ಕೆ ಸಿಗುವ ಗೌರವ ಇದು.

ಕಷ್ಟಗಳ ಕುಲುಮೆಯಲ್ಲಿ ಬೇಯುತ್ತಲೇ ಅಂಥದೊಂದು ಅಮೃತ ಘಳಿಗೆಗೆ ಹಂಬಲಿಸಿದ, ಸೋಲುಗಳ ಸರಪಳಿಯನ್ನು ತುಂಡರಿಸಿ ಗೆಲುವಿನ ಗಾಳಿಪಟವನ್ನು ಮುಗಿಲಿಗೆ ಹಾರಿಬಿಟ್ಟ, ಅಂತಃಕರಣವನ್ನೇ ಉಸಿರಾಗಿಸಿಕೊಂಡ ಹೃದಯವಂತರ ಕಥೆಗಳು ಈ ಪುಸ್ತಕದ ಪುಟಗಳನ್ನು ತುಂಬಿಕೊಂಡಿವೆ.
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)