Aravind Gupta, V. S. S. Shastri
ನಿರುಪಯುಕ್ತ ವಸ್ತುಗಳಿಂದ ಉಪಯುಕ್ತ ಆಟಿಕೆಗಳು
ನಿರುಪಯುಕ್ತ ವಸ್ತುಗಳಿಂದ ಉಪಯುಕ್ತ ಆಟಿಕೆಗಳು
Publisher - ನವಕರ್ನಾಟಕ ಪ್ರಕಾಶನ
- Free Shipping Above ₹250
- Cash on Delivery (COD) Available
Pages -
Type -
ಅರವಿಂದ ಗುಪ್ತ ಅವರು ಕಾನ್ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆಯಿಂದ ಎಲೆಕ್ನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ (1975), ವಿಜ್ಞಾನ ಚಟುವಟಿಕೆಗಳ ಕುರಿತು 15 ಕೃತಿಗಳನ್ನು ರಚಿಸಿದ್ದಾರೆ. ಹಿಂದಿಯಲ್ಲಿ ಅವರ 140 ಕೃತಿಗಳು ಹೊರಬಂದಿವೆ. ದೂರದರ್ಶನಕ್ಕಾಗಿ ವಿಜ್ಞಾನ ಕುರಿತು 125 ಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರ ಮೊದಲ ಪುಸ್ತಕ 'ಮ್ಯಾಚ್ ಸ್ಟಿಕ್ ಮಾಡೆಲ್ಸ್ ಅಂಡ್ ಅದರ್ ಸೈನ್ಸ್ ಎಕ್ಸ್‌ಪೆರಿಮೆಂಟ್ಸ್' ಭಾರತದ 12 ಭಾಷೆಗಳಿಗೆ ಅನುವಾದವಾಗಿದೆ; 5 ಲಕ್ಷ ಪ್ರತಿಗಳು ಮಾರಾಟವಾಗಿವೆ. ಮಕ್ಕಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಸ್ಥಾಪಿಸಿರುವ ರಾಷ್ಟ್ರೀಯ ಪ್ರಶಸ್ತಿಗೆ ಮೊದಲು ಭಾಜನರಾದವರು ಇವರು (1988), ಐ.ಐ.ಟಿ. ಕಾನ್ಪುರದ ಹಳೆಯ ವಿದ್ಯಾರ್ಥಿಗಳ ವಿಶೇಷ ಪ್ರಶಸ್ತಿ (2000), ಇಂದಿರಾಗಾಂಧಿ ಜನಪ್ರಿಯ ವಿಜ್ಞಾನ ಪ್ರಶಸ್ತಿ (2008), ಮಕ್ಕಳಲ್ಲಿ ವಿಜ್ಞಾನಾಸಕ್ತಿ ಮೂಡಿಸಲು ಸ್ಥಾಪಿಸಿದ 'ಥರ್ಡ್ ವರ್ಲ್ಡ್ ಅಕಾಡೆಮಿ ಆಫ್ ಸೈನ್ಸ್ ಪ್ರಶಸ್ತಿ' (2010), ಇವರಿಗೆ ಬಂದಿರುವ ಪ್ರಶಸ್ತಿಗಳಲ್ಲಿ ಕೆಲವು. ಇವರ ವೆಬ್‌ಸೈಟ್ http//arvindgupta toys.com ನಲ್ಲಿ ಅಸಂಖ್ಯ ಪುಸ್ತಕಗಳೂ, ಆಟಿಕೆಗಳೂ ಲಭ್ಯವಿವೆ.
ವಿ. ಎಸ್. ಎಸ್. ಶಾಸ್ತ್ರಿ ಅವರು ಗಣಿತದ ಕುಶಲಕರ್ಮಿಗಳು. ಒರಿಗಾಮಿ-ಗಣಿತದ ಸಂಬಂಧದ ಬಗ್ಗೆ ಅಧಿಕೃತವಾಗಿ ಮಾತನಾಡಬಲ್ಲ ಕೆಲವೇ ಕೆಲವರಲ್ಲಿ ಇವರೂ ಒಬ್ಬರು. ಹಲವು ಕೃತಿಗಳನ್ನು ರಚಿಸಿದ್ದಾರೆ. 2011ರಲ್ಲಿ ಕರ್ನಾಟಕ ವಿಷನ್ ಗ್ರೂಪ್‌ನಿಂದ ವಿಜ್ಞಾನ ಸಂವಹನಕಾರ ಪ್ರಶಸ್ತಿಯನ್ನೂ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ರೇಷ್ಮಾ ಬಾರ್ವೆ ಅವರು ಪೂನಾದ ಅಭಿನವ ಕಲಾ ವಿದ್ಯಾಲಯದಲ್ಲಿ ವಾಣಿಜ್ಯ ಕಲೆಯನ್ನು ಅಧ್ಯಯನ ಮಾಡಿದ್ದಾರೆ. ಸ್ವತಂತ್ರ ಕಲಾವಿದೆಯಾಗಿ ವಿನ್ಯಾಸಕಾರರಾಗಿ, ಮಕ್ಕಳ ಅನೇಕ ಪುಸ್ತಕಗಳಿಗೆ ಚಿತ್ರಗಳನ್ನು ರಚಿಸಿದ್ದಾರೆ.
Share
Subscribe to our emails
Subscribe to our mailing list for insider news, product launches, and more.