Skip to product information
1 of 1

Girish Karnad

ತುಘಲಕ್

ತುಘಲಕ್

Publisher - ಮನೋಹರ ಗ್ರಂಥಮಾಲಾ

Regular price Rs. 130.00
Regular price Rs. 130.00 Sale price Rs. 130.00
Sale Sold out
Shipping calculated at checkout.

- Free Shipping Above ₹250

- Cash on Delivery (COD) Available

Pages - 101

Type - Paperback

ಈ ಕೃತಿಯ ಬಗ್ಗೆ -

ಇದು ಗಿರೀಶ ಕಾರ್ನಾಡರ ಎರಡನೆಯ ನಾಟಕ. ಈ ನಾಟಕದ ಕಥಾವಸ್ತು ಐತಿಹಾಸಿಕವಾಗಿದ್ದರೂ ಇದರ ಉದ್ದೇಶ ಇತಿಹಾಸದ ಚಿತ್ರಣವಲ್ಲ, ತುಘಲಕ್ ವಂಶದ ಹುಚ್ಚ ಮುಹಮ್ಮದನ ಅರಾಜಕತೆಯ ಆಳ್ವಿಕೆಯೇ ನಾಟಕದ ಕಾರ್ಯಪರಂಪರೆಯಾಗಿದ್ದರೂ ವಿವೇಕ-ಅವಿವೇಕಗಳ ದ್ವಂದ್ವವನ್ನು ನಾಟಕೀಯವಾಗಿ ತೋರಿಸುವ ಕೃತಿಯಲ್ಲ. ಮನುಷ್ಯ ದೇವತ್ವದ ಕನಸನ್ನು ಕಾಣುವ ವಶುವಾಗಿರುವದೇ ಇಲ್ಲಿಯ ಮೂಲಭೂತವಾದ ಸಮಸ್ಯೆಯಾಗಿದೆ. ಈ ಸಮಸ್ಯೆ ಹುಟ್ಟಿಸುವ ಅನೇಕ ಮಾನವೀಯ ಅನರ್ಥಗಳಿಗೆ ಮುಹಮ್ಮದ ಪ್ರಳಯ ಕೇ೦ದ್ರವಾಗಿದ್ದಾನೆ. ಕಾಯದೆಗಳಿಗನುಸಾರವಾಗಿ ವೇಷ ಬದಲಿಸುವ ಬೀದಿಗಳರು, ಪ್ರಾರ್ಥನೆಯ ಹೊತ್ತಿನಲ್ಲಿ ಕೊಲೆ ರಾಜಕಾರಣವನ್ನು ದೇವರ ಮಾಡುವ ಕಾರ್ಯವೆಂದು ಸರದಾರರು. ಭ್ರಮಿಸಿದ ಧರ್ಮಗುರುಗಳು, ಇಂಥ ವ್ಯಕ್ತಿಗಳ ದುರ್ದೈವಕ್ಕೆ ಸೂತ್ರಧಾರನಾದ ಮುಹಮ್ಮದ-ಹೀಗೆ ನಾಟಕದ ಮಾನುಷ ಪ್ರಪಂಚ ಜಟಿಲವಾಗಿದೆ. ವೇಷಾಂತರ, ಸ್ಥಳಾಂತರ, ಮತಾಂತರ-ಏನಾದರೂ ಮುಹಮ್ಮದನಿಗೆ ಆಗುವುದು-ಮಾಂಸ ಭಕ್ಷವಾಗಿರುವ ತನ್ನ ಆತ್ಮದ ದರ್ಶನ. ಕಾವ್ಯ, ಧರ್ಮ, ರಾಜಕಾರಣ ಮೊದಲಾದ ತನ್ನ ಸಂಸ್ಕಾರಗಳಿಗೆ ತಾನೇ ಪರಕೀಯನಾಗಿ, ದಿಲ್ಲಿಯಿಂದ ದೌಲತ್ತಾಬಾದಿನವರೆಗೆ ತನ್ನ ರಾಜ್ಯವನ್ನು, ಪ್ರಜೆಗಳನ್ನೂ ನಡೆಸಿಕೊಂಡು ಹೋದ ಆರಸ, 'ಆತ್ಮ-ಹತ್ಯೆ'ಯನ್ನು ಮಾಡಿಕೊಂಡೂ ಜೀವಂತವಾಗಿ ಉಳಿಯುತ್ತಾನೆ. ಇದೇ ಇಲ್ಲಿಯ ಹೊಸ

ಹತ್ತು ರೀತಿಯ ವೇಷವನ್ನು ತೊಟ್ಟರೂ ತಮ್ಮ ವ್ಯಕ್ತಿತ್ವವನ್ನು ತೆರೆದು ಬಿಸಿಲಿಗೆ ಒಣಗಹಾಕುವ ಪಾತ್ರಗಳು, ಆರಮನೆ, ರಾಜಬೀದಿ, ಮಸೀದೆ, ಕೋಟೆಯ ಬುರುಜು ಹೀಗೆ ಬೇಕಾದಲ್ಲಿ ಪ್ರತ್ಯಕ್ಷವಾಗುವ ಸನ್ನಿವೇಶಗಳು, ಇವೆರಡನ್ನೂ ಬೆಸೆದಂತಿರುವ ನಾಟ್ಯಧ್ವನಿ, ದೃಶ್ಯಕಾವ್ಯದ ಭಾಷೆ-ಹೀಗೆ ನಾಟಕದ ರಚನಾಕೌಶಲ ಅದ್ಭುತವಾಗಿದೆ.

- ಕೀರ್ತಿನಾಥ ಕುರ್ತಕೋಟಿ
View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)