ಸು. ರುದ್ರಮೂರ್ತಿ ಶಾಸ್ತ್ರಿ
Publisher: ಅಂಕಿತ ಪುಸ್ತಕ
Couldn't load pickup availability
ಕಾಯಕ್ಕೆ ನೆಳಲಾಗಿ ಕಾಡಿತ್ತು ಮಾಯೆ! ಪ್ರಾಣಕ್ಕೆ ಮನವಾಗಿ ಕಾಡಿತ್ತು ಮಾಯೆ! ಮನಕ್ಕೆ ನೆನಹಾಗಿ ಕಾಡಿತ್ತು ಮಾಯೆ ನೆನಹಿಂಗೆ ಅರಿವಾಗಿ ಕಾಡಿತ್ತು ಮಾಯೆ! ಜಗವ ಜಂಗುಳಿಗೆ ಬೆಂಗೋಲನೆತ್ತಿ ಕಾಡಿತ್ತು ಮಾಯೆ! ಚೆನ್ನಮಲ್ಲಿಕಾರ್ಜುನ, ನೀನೊಡ್ಡಿದ ಮಾಯೆಯನಾರೂ ಗೆಲಬಾರದು!
ಅಕ್ಕ ಕೇಳವ್ವ ನಾನೊಂದು ಕನಸು ಕಂಡೆ. ಅಕ್ಕಿ ಅಡಕೆ ತೆಂಗಿನಕಾಯ ಕಂಡೆ. ಚಿಕ್ಕ ಚಿಕ್ಕ ಜಡೆಯ ಸುಲಿಪಲ್ಲ ಗೊರವನು ಭಿಕ್ಷಕ್ಕೆ ಬಂದುದ ಕಂಡೆನವ್ವ! ಮಿಕ್ಕಿ ಮೀರಿ ಹೋಹನ ಬೆಂಬತ್ತಿ ಕೈವಿಡಿದನು ಚೆನ್ನಮಲ್ಲಿಕಾರ್ಜುನನ ಕಂಡು ಕಣ್ಣೆರೆದೆನು!
ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗೆ ಅಂಜಿದಡೆ ಎಂತಯ್ಯಾ? ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆ ತೆರೆಗಳಿಗಂಜಿದಡೆ ಎಂತಯ್ಯಾ? ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದಡೆ ಎಂತಯ್ಯಾ? ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯಾ, ಲೋಕದಲ್ಲಿ ಹುಟ್ಟಿದ ಬಳಿಕ ಸ್ತುತಿ ನಿಂದೆಗಳು ಬಂದಡೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು.
ಪ್ರಕಾಶಕರು - ಅಂಕಿತ ಪುಸ್ತಕ
