Skip to product information
1 of 1

Prof. N. Halappa

ಅಂತರರಾಷ್ಟ್ರೀಯ ಸಂಬಂಧಗಳು

ಅಂತರರಾಷ್ಟ್ರೀಯ ಸಂಬಂಧಗಳು

Publisher -

Regular price Rs. 400.00
Regular price Rs. 400.00 Sale price Rs. 400.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages -

Type -

Gift Wrap
Gift Wrap Rs. 15.00

ಲೇಖಕರ ಪರಿಚಯ:

 ಶ್ರೀಯುತ ಪ್ರೊ.ಎನ್. ಹಾಲಪ್ಪನವರು ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕು, ಕಟ್ಟೆಬೆನ್ನೂರಿನಲ್ಲಿ ಜನಿಸಿದರು. ಇವರ ತಂದೆ ನೀಲಗುಂದ ಚೆನ್ನಬಸಪ್ಪನವರು, ತಾಯಿ ಶ್ರೀಮತಿ ಕೊಟ್ರಾ ಬಸಮ್ಮನವರು. ಶ್ರೀಯುತರು ಪ್ರಾಥಮಿಕ ಶಿಕ್ಷಣವನ್ನು ಹೂವಿನಹಡಗಲಿಯಲ್ಲಿ ಪ್ರೌಢಶಿಕ್ಷಣ ಮತ್ತು ಕಾಲೇಜು ಶಿಕ್ಷಣವನ್ನು ದಾವಣಗೆರೆಯ ಡಿ.ಆರ್.ಎಂ. ಕಾಲೇಜಿನಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪೂರೈಸಿ, ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ರಾಜ್ಯಶಾಸ್ತ್ರ ವಿಭಾಗದಲ್ಲಿ ಉನ್ನತ ಶಿಕ್ಷಣವನ್ನು ಪಡೆದರು.

ಶ್ರೀಯುತರು ಕರ್ನಾಟಕ ರಾಜ್ಯದ ಅನೇಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ರಾಜ್ಯಶಾಸ್ತ್ರದ ಉಪನ್ಯಾಸಕರಾಗಿ, ಪ್ರವಚಕರಾಗಿ, ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ, ಸುಮಾರು 35 ವರ್ಷಗಳ ಕಾಲ ತಮ್ಮ ಜ್ಞಾನವನ್ನು ವಿದ್ಯಾರ್ಥಿಗಳ ಜ್ಞಾನರ್ಜನೆಗೆ ಧಾರೆಯೆರೆದು, ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿ ಉತ್ತಮ ಸೇವೆ ಸಲ್ಲಿಸಿ 1977ರಲ್ಲಿ ನಿವೃತ್ತಿ ಹೊಂದಿದರು.

ಶ್ರೀಯುತರು ಸೇವೆ ಸಲ್ಲಿಸಿದ ಕಾಲೇಜು ಮತ್ತು ಸ್ಥಳ

1997-98ರಲ್ಲಿ ಮೈಸೂರಿನಲ್ಲಿರುವ ಶಾರದ ವಿಲಾಸ ಕಾಲೇಜ್‌ನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿರುತ್ತಾರೆ.

1998-99ರಲ್ಲಿ ಜೆ.ಎಸ್.ಎಸ್. ಮಹಿಳಾ ಪ್ರಥಮ ದರ್ಜೆ ಕಾಲೇಜುನಲ್ಲಿ ಪ್ರಾಂಶುಪಾಲರಾಗಿ, ಬೆಂಗಳೂರು ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆಗಳಲ್ಲಿ ಸಮನ್ವಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಐ.ಎ.ಎಸ್. ಮತ್ತು ಕೆ.ಎ.ಎಸ್. ನಂತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಆಡಳಿತ, ರಾಜ್ಯಶಾಸ್ತ್ರ ಮತ್ತು ಅಂತರರಾಷ್ಟ್ರೀಯ ಸಂಬಂಧಗಳು ಎಂಬ ವಿಷಯಗಳನ್ನು ಬೋಧಿಸಿ ಸಾವಿರಾರು ಸ್ಪರ್ಧಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಕಾರಣ ಕರ್ತರಾಗಿರುತ್ತಾರೆ. ಬೆಂಗಳೂರಿನ ಜೆ.ಎಸ್.ಎಸ್. ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ಸಾರ್ವಜನಿಕ ಆಡಳಿತ ಮತ್ತು ರಾಜ್ಯಶಾಸ್ತ್ರ ವಿಷಯವನ್ನು ಬೋಧಿಸಿದ್ದಾರೆ. ಅಲ್ಲದೆ ಕನ್ನಡ ಮಾಧ್ಯಮದಲ್ಲಿ 15ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಶ್ರೀಯುತರು ವಿದ್ಯಾರ್ಥಿಗಳಿಗೆ ದೊರೆತ ಅಪ್ರತಿಮ ಮಾರ್ಗದರ್ಶಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿರುತ್ತಾರೆ.

 

View full details