Ravi Belagere
ಅರ್ತಿ
ಅರ್ತಿ
Publisher - ಭಾವನಾ ಪ್ರಕಾಶನ
- Free Shipping Above ₹350
- Cash on Delivery (COD) Available*
Pages - 96
Type - Paperback
Couldn't load pickup availability
ರವಿ ಬೆಳಗೆರೆ! ಅವರು ಕನ್ನಡಿಗರ ಮನೆಮಾತು. ಅತ್ಯಂತ ಹೆಚ್ಚು ಬರೆದ, ಓದಿಸಿಕೊಳ್ಳುವ ಲೇಖಕ, ಪತ್ರಕರ್ತ, ಕಾದಂಬರಿಕಾರ, ಅನುವಾದಕ. ಅವರ ಒಂದು ಹೊಸ ಪುಸ್ತಕ ಬಿಡುಗಡೆಯಾಗುತ್ತದೆ ಅಂದರೆ ಸಾವಿರಾರು ಓದುಗರು ಕರ್ನಾಟಕದಾದ್ಯಂತ ಅದಕ್ಕಾಗಿ ಕಾಯುತ್ತಿದ್ದರು. ಅವರು ಒಂದು ವಿಷಯ, ಒಂದು ಸಂಗತಿ ಅಥವಾ ಒಂದು ಸಪ್ಟೆಕ್ಟ್ ಇಟ್ಟುಕೊಂಡು ಬರೆದವರಲ್ಲ. ಮನುಷ್ಯ ಸಂಬಂಧಗಳು ಅವರ ಆಸಕ್ತಿಯ ಪ್ರಥಮ ವಿಷಯ. ಆದರೆ ಅವರು ಅತ್ಯಂತ ಆಸಕ್ತಿಯಿಂದ ದೇಶ, ಇತಿಹಾಸ, ಯುದ್ಧಗಳ ಬಗ್ಗೆ ಬರೆದಿದ್ದಾರೆ. ಯುದ್ಧಗಳ ಪ್ರತ್ಯಕ್ಷ ವರದಿ ಮಾಡಿದ್ದಾರೆ. ಕಾರ್ಗಿಲ್ ಕದನ ಭೂಮಿ, ಅಫಘನಿಸ್ತಾನ ಮತ್ತು ಪುಲ್ವಾಮಾದ ಮಹಾ ಯುದ್ಧರಂಗದಲ್ಲಿ ಓಡಾಡಿದ್ದಾರೆ. ಅಂತೆಯೇ ಅವರ ಕಾದಂಬರಿಗಳಲ್ಲಿ ಪ್ರೀತಿ, ತಂತ್ರ, ಅಂಡರ್‌ವರ್ಲ್, ರಾಜಕಾರಣ, ಕಾಮ, ಟೆರರಿಸಂ ವಿಜೃಂಭಿಸಿವೆ. ಅವರ ತನಿಖಾ ವರದಿ ಪುಸ್ತಕವಾಗಿದೆ. ಮೂಲತಃ ರವಿ ಬೆಳಗೆರೆ ಕಥೆಗಾರರೆಂದೇ ಹೆಸರಾದವರು. ಅವರು ತಮ್ಮ ಇಷ್ಟದ ಕವಿ ಸಾಹಿರ್ ಲೂಧಿಯಾನವಿಯಿಂದ ಹಿಡಿದು ತೆಲುಗು ಲೇಖಕ ಗುಡಿಪಾಟು ವೆಂಕಟ ಚಲಂ ತನಕ ಅನೇಕರ ಜೀವನ ಕಥನ ಬರೆದಿದ್ದಾರೆ, ಅನುವಾದಿಸಿದ್ದಾರೆ. ರವಿ ಬೆಳಗೆರೆ ಬರೆದ 'ಅರ್ತಿ' ಸೈಕಿಯಾಟ್ರಿಕ್ ಸಪ್ಟೆಕ್ಸ್‌ನ ಕುರಿತಾಗಿದ್ದು, ಇದು ಸೈಕಾಲಜಿ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಪುಸ್ತಕವಾಗಿರುತ್ತದೆ. ಈ ಪುಸ್ತಕ ಮೂವತ್ತೈದು ವರ್ಷಗಳ ನಂತರ ಮರು ಮುದ್ರಣಗೊಂಡಿದೆ. ಎಂದಿನಂತೆ ಒಪ್ಪಿಕೊಳ್ಳಿ.
-ಭಾವನಾ ಬೆಳಗೆರೆ.
Share

Subscribe to our emails
Subscribe to our mailing list for insider news, product launches, and more.