Vishweshwara Bhat
Publisher - ವಿಶ್ವವಾಣಿ ಪುಸ್ತಕ
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಹಸಿದ ಹೊಟ್ಟೆ ತುಂಬಿಸಲು, ಅನಾರೋಗ್ಯ ಗುಣಪಡಿಸಲು, ರಕ್ಷಣೆ ಇಲ್ಲದವರ ರಕ್ಷಿಸಲು ಹಾಗೂ ಮರುಭೂಮಿಯನ್ನು ಅರಳಿಸಲು ಇಸ್ರೇಲಿಗರು ಏನೆಲ್ಲಾ ಮಾಡುತ್ತಿದ್ದಾರೆ. ಗೊತ್ತಾ?
ಇಸ್ರೇಲ್ ಎಂಬ ಪುಟ್ಟ ದೇಶದಲ್ಲಿರುವ ಎಲ್ಲಾ ಧರ್ಮಗಳ ಸೃಜನಶೀಲ ಮಿದುಳುಗಳೂ ಹಠಕ್ಕೆ ಬಿದ್ದವರಂತೆ ಜಗತ್ತನ್ನು ಸುಂದರ ತಾಣವನ್ನಾಗಿ ರೂಪಿಸಲು ಪಟ್ಟು ಹಿಡಿದು ಕುಳಿತಿರುವುದು ಏಕೆ? ಜಗತ್ತಿನಾದ್ಯಂತ ನೂರಾರು ಕೋಟಿ ಜನರ ಬದುಕನ್ನು ಇಸ್ರೇಲಿನ ಅದ್ಭುತ ಆವಿಷ್ಕಾರಗಳು ಹೇಗೆ ಬದಲಿಸುತ್ತಿವೆ ಎಂಬುದನ್ನು 'ಈ' ಕೃತಿ ಕಟ್ಟಿಕೊಡುತ್ತದೆ. ಜಗತ್ತನ್ನು ದುರಸ್ತಿ ಮಾಡುವ ಯಹೂದಿಗಳ 'ಟಿಕ್ಕುನ್ ಓಲಮ್' ಎಂಬ ಚಿಂತನೆಯನ್ನು ಬಳಸಿ, ದೇಶದೇಶಗಳ ಆತ್ಮವನ್ನೇ ತಟ್ಟಿ, ಪ್ರಪಂಚದ ಬಹುದೊಡ್ಡ ಸವಾಲುಗಳನ್ನು ಮುಗುಮ್ಮಾಗಿ ಪರಿಹರಿಸಲು ಇಸೇಲ್ ತನ್ನ ಗಾತ್ರಕ್ಕೆ ಮೀರಿದ ಪಾತ್ರವನ್ನು ನಿಭಾಯಿಸುತ್ತಿದೆ.
ಇಸ್ರೇಲ್‌ನಲ್ಲಿ ಪರಮಾದ್ಭುತ ಆವಿಷ್ಕಾರಿಗಳಿದ್ದಾರೆ. ಜನರನ್ನು ಉಳಿಸುವ ಹಾಗೂ ಬದುಕಿನ ಉನ್ನತ ಉದ್ದೇಶವನ್ನು ಕಂಡುಕೊಳ್ಳುವ ಸೂತ್ರಕ್ಕೆ ಅವರೆಲ್ಲ ಬಂದಿಗಳು, ವೈಫಲ್ಯ ಹಾಗೂ ಅಡ್ಡಿ ಆತಂಕಗಳ ಮುಖಕ್ಕೆ ಹೊಡೆದಂತೆ ಈ ಸೃಜನಶೀಲ ಮನಸ್ಸುಗಳು ಅವಕಾಶ ಮತ್ತು ಧೈರ್ಯವನ್ನು ಹುಡುಹುಡುಕಿ ಬಾಚಿಕೊಳ್ಳುತ್ತವೆ. ತನ್ನ ಪಾಲಿಗಿಂತ ಹೆಚ್ಚು ಕತ್ತಲೆಯನ್ನು ಅನುಭವಿಸಿದ ದೇಶಕ್ಕೆ ಈ ಕತೆಗಳೇ ಬೆಳಕಿನ ಕಿರಣಗಳು. ಉದ್ಯಮಶೀಲರು, ಸ್ಟಾರ್ಟಪ್‌ಗಳ ಬಗ್ಗೆ ಆಸಕ್ತಿ ಹೊಂದಿರುವವರು ಹಾಗೂ ಸೃಜನಶೀಲ ಆವಿಷ್ಕಾರಗಳ ಬಗ್ಗೆ ಕುತೂಹಲ ಹೊಂದಿರುವ ಪ್ರತಿಯೊಬ್ಬರೂ ಓದಬೇಕಾದ ಪುಸ್ತಕವಿದು.
