Skip to product information
1 of 2

Viveka Shanabhaga

ಬಹುಮುಖಿ

ಬಹುಮುಖಿ

Publisher - ಅಕ್ಷರ ಪ್ರಕಾಶನ

Regular price Rs. 80.00
Regular price Rs. 80.00 Sale price Rs. 80.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 72

Type - Paperback

Gift Wrap
Gift Wrap Rs. 15.00

ಇದು ಈವತ್ತಿನ ಕಾಲದಲ್ಲಿ ಜರುಗುವ ನಾಟಕ, ರೋಚಕ ಕಥೆಯೊಂದರ ಬೆನ್ನಟ್ಟಿ ಹೋದ ಪತ್ರಕರ್ತನೊಬ್ಬನಿಗೆ ಎದುರಾಗುವ ಜಗತ್ತು ಇಲ್ಲಿ ಹಲವು ಪಾತಳಿಗಳಲ್ಲಿ ಬಿಚ್ಚಿಕೊಳ್ಳುತ್ತ ಹೋಗುತ್ತದೆ. ಅವನು ಸೃಷ್ಟಿಸಿದ ಸುದ್ದಿಯ ಮುಖಾಂತರ ಅವನ ಜೀವನದೊಳಕ್ಕೆ ಬರುವ ಜನರು ಅವರವರ ಕಥೆಗಳನ್ನು ಮುಂಚೂಣಿಗೆ ತರುತ್ತಾರೆ ಮತ್ತು ಆ ಮೂಲಕ ಪಲ್ಲಟದ ನೋವು, ಶಹರದ ಬದುಕಿನ ಢಾಂಬಿಕತೆ, ಪೊಳ್ಳು ಸಂಬಂಧಗಳ ಅಸಹನೀಯತೆ, ನಗರವೆಂಬ ಬೆಂಕಿಯೊಳಗೆ ಧಾವಿಸಿ ಬಿದ್ದು ಉರಿದು ಹೋಗುತ್ತಿರುವ ಜೀವನಕ್ರಮಗಳು ಅನಾವರಣಗೊಳ್ಳುತ್ತವೆ.

ನಮ್ಮ ದಿನನಿತ್ಯಗಳನ್ನು ಅನೇಕ ವಿಧಗಳಲ್ಲಿ ಪ್ರಭಾವಿಸುತ್ತಿರುವ ಮಾಧ್ಯಮಗಳು, ಅವು ಹುಟ್ಟಿಸಿದ ಭ್ರಮಾಲೋಕದಲ್ಲಿ ತಾಳತಪ್ಪಿದ ಸಂಬಂಧಗಳು, ಇತಿಹಾಸ-ಕಥನ ನೆನಪುಗಳನ್ನು ಕುಶಲ ಕುತಂತ್ರದಿಂದ ಬಳಸುವ ಜನರು ನಾಟಕದುದ್ದಕ್ಕೂ ಹಲವು ವೇಶಗಳಲ್ಲಿ ಬರುತ್ತಾರೆ. ಯಾವುದು ಕಥನ, ಯಾವುದು ಇತಿಹಾಸ, ಯಾವುದು ವೈಯಕ್ತಿಕ ದುರಂತ, ಯಾವುದು ಜೀವನೋಪಾಯದ ಕಾಯಕ ಅನ್ನುವುದು ಸ್ಪಷ್ಟವಾಗದ, ಯಾರು ಯಾರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆಂದು ತಿಳಿಯದ ವಿಶ್ವದೊಳಗೆ ಈ ನಾಟಕವಿದೆ.

View full details