Shreenidhi Subhramanya
Publisher -
- Free Shipping
- Cash on Delivery (COD) Available
Pages -
Type -
Couldn't load pickup availability
ಮಂಗೇಶರಾಯರು ದಕ್ಷಿಣ ಕನ್ನಡ ಜಿಲ್ಲೆಯ ಬಂಟವಾಳದಲ್ಲಿ ೧೮೭೪ ಫೆಬ್ರುವರಿ ೨೨ ರಂದು ಜನಿಸಿದರು. ಇವರ ತಾಯಿಯ ಹೆಸರು ಶಾಂತಾದುರ್ಗಾ.
ಬಂಟವಾಳದಲ್ಲಿಯೇ ಅವರ ಪ್ರಾಥಮಿಕ ವಿದ್ಯಾಭ್ಯಾಸ ನಡೆಯಿತು. ಬಡತನದ ಕಾರಣ ಮಕ್ಕಳ ವಿದ್ಯೆಗಾಗಿ ಅವರ ತಂದೆ ಸಾಲ ಮಾಡಿದ್ದರು. ೧೮೯೦ರಲ್ಲಿ ರಾಮಪ್ಪಯ್ಯ ತೀರಿಕೊಂಡಾಗ ಮಂಗೇಶರಾಯರಿಗೆ ಹದಿನಾರು ವರ್ಷದ ಪ್ರಾಯವಾಗಿದ್ದು, ಮಂಗಳೂರಿನಲ್ಲಿ ಓದುತ್ತಿದ್ದರು.
ಅಣ್ಣ ಮದ್ರಾಸ್ (ಈಗಿನ ಚೆನ್ನೈ) ನಲ್ಲಿ ಓದುತ್ತಿದ್ದುದರಿಂದ ಸಂಸಾರದ ಜವಾಬ್ದಾರಿ ಇವರ ಮೇಲೇ ಬಿತ್ತು. ೧೮೯೪ ರಲ್ಲಿ ಇವರ ಮದುವೆ ಖ್ಯಾತನಾಮರಾದ ಬೆನಗಲ್ ರಾಮರಾವ್ ಅವರ ತಂಗಿ ಭವಾನಿಬಾಯಿಯವರೊಂದಿಗೆ ಜರುಗಿತು. ಈಗಿನ ಪಿಯುಸಿ ಎರಡನೆಯ ವರ್ಷಕ್ಕೆ ತತ್ಸಮವಾದ, ಕಾಲೇಜಿನ ಮೊದಲ ವರ್ಷದ ಎಫ್.ಏ.(ಆರ್ಟ್ಸ್) ತರಗತಿಯಲ್ಲಿ ಉತ್ತೀರ್ಣರಾದರು.
ಬಳಿಕ ಇವರು ೧೮೯೬ ರಲ್ಲಿ ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಕನ್ನಡ ಪಂಡಿತ ಹುದ್ದೆ ಪಡೆದರು. ಇದಕ್ಕಾಗಿ ಅವರು ಕನ್ನಡ ವಿಶಿಷ್ಟ ಪರೀಕ್ಷೆಯಲ್ಲಿ ಪಾಸಾಗಿದ್ದರು. ಇಲ್ಲಿ ನಂದಳಿಕೆ ಲಕ್ಷ್ಮೀನಾರಾಯಣರು (ಮುದ್ದಣ ಕವಿ) ಸಹೋದ್ಯೋಗಿ ಯಾಗಿದ್ದರು. ಮಂಜೇಶ್ವರದ ಗೋವಿಂದ ಪೈಯವರು ಶಿಷ್ಯರಾಗಿದ್ದರು.
ಬಿ.ಎ ಪದವಿಯನ್ನು ಪಡೆದ ಬಳಿಕ ಮದ್ರಾಸಿನಲ್ಲಿ ಎಲ್ ಡಿ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಮರಳಿ ಬಂದು ಮಂಗಳೂರು ಕಾಲೇಜಿನ ಉಪಾಧ್ಯಾಯ ವೃತ್ತಿಯನ್ನು ಮುಂದುವರೆಸಿದರು. ಅನತಿ ಕಾಲದಲ್ಲೇ ಮಂಗಳೂರಿನ ವಿದ್ಯಾ ಇಲಾಖೆಯಲ್ಲಿ ಸಬ್ ಅಸಿಸ್ಟಂಟ್ ಶಾಲಾ ಇನ್ಸ್‌ಪೆಕ್ಟರಾಗಿ ನೇಮಕಗೊಂಡರು. ಆಮೇಲೆ ಟ್ರೈನಿಂಗ್ ಶಾಲೆಯ ಅಧ್ಯಾಪಕರೂ ಆದರು.
ಶಾಲಾ ಇನ್ಸ್‌ಪೆಕ್ಟರಾಗಿದ್ದಾಗ ಉಪಾಧ್ಯಾಯರನ್ನು ಗೌರವದಿಂದ ಬಹುವಚನದಲ್ಲಿ ಮಾತಾಡಿಸಿ, ಮಕ್ಕಳ ಮನಸ್ಸನ್ನು ಆಕರ್ಷಿಸುವ ರೀತಿಯಲ್ಲಿ ಪಾಠ ಹೇಳುವ ಕ್ರಮವನ್ನು ನಯವಾಗಿ ತಿಳಿಹೇಳುವ ಅವರ ಕ್ರಮವೇ ಹೊಸ ತರಹದ್ದಾಗಿದ್ದು, ಇನ್ಸ್‌ಪೆಕ್ಟರ್ ಅಂದರೆ ಕಳವನ್ನು ಪತ್ತೆಹಚ್ಚಲು ಬರುವ ಪೊಲೀಸರಲ್ಲ ಎಂದು ಉಪಾಧ್ಯಾರ ಮನೋಭಾವನೆ ಬದಲಾಯಿತು.
ಅವರ ಆಗಮನವನ್ನು ಎದುರು ನೊಡುವ, ತಮ್ಮಲ್ಲಿನ ಸಂದರ್ಶನದ ಬಳಿಕ ಮುಂದಿನ ಊರಿಗೆ ಅವರನ್ನು ಮುಟ್ಟಿಸುವ ಉತ್ಸಾಹ ಉಪಾಧ್ಯಾಯರಲ್ಲಿ ಕಾಣಿಸತೊಡಗಿತು. ೧೯೨೧ರಲ್ಲಿ ಅವರನ್ನು ಕೊಡಗಿನ ಶಾಲಾ ಇನ್ಸ್‌ಪೆಕ್ಟರಾಗಿ ವರ್ಗಾಯಿಸಿದಾಗ, ತಮ್ಮವರಂತೆ ಹಾಗೂ ಆಗಿದ್ದ ಆಂಗ್ಲರಂತೆ, ಸೂಟು-ಬೂಟು ಧರಿಸದ, ಕಟ್ಟುನಿಟ್ಟಿನ ಶಿಸ್ತಿಲ್ಲದ ವಿದ್ಯಾಧಿಕಾರಿಯೆಂದು ತುಸು ಅಸಡ್ಡೆಯಿಂದ ಕೊಡಗಿನ ಜನತೆ ಕಂಡರು.
ಇನ್ಸ್‌ಪೆಕ್ಟರ್ ಜೆ ಎ ಯೇಟ್ಸನ ಹೊಸ ರೀತಿಯ ಪಾಠಕ್ರಮವನ್ನು ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯಗತ ಮಾಡುವದರಲ್ಲಿ ಹೆಚ್ಚಿನ ಶ್ರಮವಹಿಸಿದರು. ಎರಡು ವರ್ಷಗಳ ನಂತರ ಮಡಿಕೇರಿಯ ಸೆಂಟ್ರಲ್ ಹೈಸ್ಕೂಲಿನ ಮುಖ್ಯೋಪಾಧ್ಯಾರನ್ನಾಗಿ ಪಂಜೆಯವರನ್ನು ನೇಮಿಸಲಾಯಿತು.
ಅದುವರೆಗೆ ಆ ಶಾಲೆಯ ಮುಖ್ಯೋಪಾಧ್ಯಾರಾಗಿ ಆಂಗ್ಲರೇ ಇದ್ದು, ಈಗ ಬಂದ ದೇಶೀಯನನ್ನು ಸ್ಥಳೀಯ ಸಹೋದ್ಯೋಗಿಗಳು ತಾತ್ಸಾರದಿಂದ ಕಂಡರು. ೧೯೨೯ ರವರೆಗೆ ಅವರು ಈ ಹುದ್ದೆಯಲ್ಲಿದ್ದು ನಿವೃತ್ತರಾದಾಗ ೨೨ ವರ್ಷಗಳ ಕಾಲ ಜನಸೇವೆ ಸಂದಿತ್ತು.
