Skip to product information
1 of 12

Anupama Niranjan

ದಿನಕ್ಕೊಂದು ಕಥೆ - 12 ಸಂಪುಟಗಳು

ದಿನಕ್ಕೊಂದು ಕಥೆ - 12 ಸಂಪುಟಗಳು

Publisher -

Regular price Rs. 810.00
Regular price Rs. 810.00 Sale price Rs. 810.00
Sale Sold out
Shipping calculated at checkout.

- Free Shipping

- Cash on Delivery (COD) Available

ದಿನಕ್ಕೊಂದು ಕಥೆ - 12 ಸಂಪುಟಗಳು: ೩೬೫ ಕಥೆಗಳು. ‘ದಿನಕ್ಕೊಂದು ಕಥೆ’ ಎಂಬ ಕಥಾಮಾಲಿಕೆ ಶಿಶುಸಾಹಿತ್ಯಕ್ಕೆ ಅನುಪಮಾ ಅವರ ಅನುಪಮ ಕೊಡುಗೆಯಾಗಿದೆ. ದಿನಕ್ಕೊಂದು ಕಥೆ ಕನ್ನಡದಲ್ಲಿ ಪುರಾಣ ಕಥೆಗಳನ್ನು, ಇತರ ದೇಶಗಳ ಕಥೆಗಳನ್ನು, ಜಾನಪದ ಕಥೆಗಳನ್ನು ಒಟ್ಟುಗೂಡಿಸಿ ಸರಳವಾಗಿ ಹೆಣೆಯಲಾದ ಸಂಪುಟಗಳ ಮಾಲಿಕೆ. ವರ್ಷವಿಡೀ ದಿನಕ್ಕೊಂದು ಕಥೆಯಂತೆ ಓದಿಕೊಂಡು ಹೋಗಬಲ್ಲಂತೆ 365 ಕಥೆಗಳಿವೆ.

ವೃತ್ತಿಯಲ್ಲಿ ವೈದ್ಯರಾದ ಅನುಪಮಾ ಅವರು, ಕನ್ನಡ ಕಾದಂಬರಿ ಕ್ಷೇತ್ರವು ತನ್ನ ಆಳ ಅಗಲಗಳನ್ನು ವಿಸ್ತರಿಸಿಕೊಂಡು ಮುನ್ನಡೆಯುತ್ತಿರುವ ಸಂಧರ್ಭದಲ್ಲಿ ಆ ಕ್ಷೇತ್ರಕ್ಕೆ ಕಾಲಿಟ್ಟರು. ಒಬ್ಬ ಒಳ್ಳೆಯ ವೈದ್ಯರಾಗುವುದರ ಜೊತೆಗೆ ಗಟ್ಟಿ ಸಾಹಿತಿಯಾಗಿ ಬೆಳೆದುನಿಂತರು. ಕುಳಕುಂದ ಶಿವರಾಯರೆಂದೇ ಚಿರಪರಿಚಿತರಾಗಿದ್ದ ನಿರಂಜನ ಅವರೊಂದಿಗೆ ನಡೆದ ವಿವಾಹ, ಅವರಿಗೆ ಲೇಖಕಿಯಾಗಿ ತಮ್ಮ ಗುರಿಯನ್ನು ಸಾಧಿಸುವಲ್ಲಿ ಮತ್ತಷ್ಟು ಸಹಕಾರಿಯಾಯಿತು. ಡಾ.ಅನುಪಮಾ ನಿರಂಜನ ಅವರು ಬುದ್ದಿವಿಕಾಸಕ್ಕೆ ಪ್ರೇರಕವಾಗಬಲ್ಲ ವಿಚಾರ ಸಾಹಿತ್ಯದ ಜೊತೆಗೆ ವೈದ್ಯಕೀಯ ಗ್ರಂಥಗಳನ್ನು ಸಹ ರಚಿಸಿದರು.

View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)