Skip to product information
1 of 1

Leo Tolstoy

ಆರು ಟಾಲ್‌ಸ್ಟಾಯ್ ಕತೆಗಳು

ಆರು ಟಾಲ್‌ಸ್ಟಾಯ್ ಕತೆಗಳು

Publisher - ಅಕ್ಷರ ಪ್ರಕಾಶನ

Regular price Rs. 150.00
Regular price Rs. 150.00 Sale price Rs. 150.00
Sale Sold out
Shipping calculated at checkout.

- Free Shipping

- Cash on Delivery (COD) Available

ಪ್ರಸ್ತುತ ಸಂಕಲನದ ಎಲ್ಲಾ ಕತೆಗಳೂ ಟಾಲ್‌ಸ್ಟಾಯ್‌ಯವರ ದ್ವಿತೀಯಾರ್ಧದ ಬರವಣಿಗೆಯನ್ನು ಪ್ರತಿನಿಧಿಸುವ ಕೆಲವು ಮುಖ್ಯ ನಿದರ್ಶನಗಳು.

ಈ ಕತೆಗಳಲ್ಲಿ ಪ್ರಜ್ಞಾಪೂರ್ವಕ ಕಲೆಗಾರಿಕೆಯಾಗಲೀ ಕುಸುರಿ ಕೆಲಸದ ಕಸುಬುಗಾರಿಕೆಯಾಗಲೀ ಕಂಡುಬರುವುದಿಲ್ಲ. ಹಿರಿಯನೊಬ್ಬ ತನ್ನ ಮಕ್ಕಳು, ಮೊಮ್ಮಕ್ಕಳು, ಬಂಧು ಬಾಂಧವರು, ನೆರೆ ಹೊರೆಯವರೊಂದಿಗೆ ಹಂಚಿಕೊಂಡ ಅನುಭವ ಕಥನಗಳಂತಿರುವ ಈ ಬರಹಗಳು ತಮ್ಮ ಸರಳತೆ ಮತ್ತು ಸಹಜತೆಗಳಿಂದಾಗಿ ಮನಮುಟ್ಟುತ್ತವೆ. ಅಪಾರ ಜೀವನಾನುಭವದಿಂದ ಮೂಡಿಬಂದ ವಿವೇಕ ಈ ಕತೆಗಳ ರೂಪದಲ್ಲಿ ನಿರೂಪಣೆಗೆ ಒಳಗಾಗಿದೆ ಎನಿಸುತ್ತದೆ. ಈ ಎಲ್ಲ ಕತೆಗಳ ಕೇಂದ್ರದಲ್ಲಿರುವುದು ಸಾಮಾನ್ಯ ರಷ್ಯನ್ನರು. ಅವರ ಬದುಕಿನ ಸುತ್ತ ಹೆಣೆದ ದೃಷ್ಟಾಂತಗಳಂತಿರುವ ಈ ಕತೆಗಳು ಮೇಲುನೋಟಕ್ಕೆ ಸರಳವೆನಿಸಿದರೂ ಬದುಕನ್ನು ಕುರಿತು ಅನೇಕ ಮೂಲಭೂತವಾದ ತಾತ್ವಿಕ ಪ್ರಶ್ನೆಗಳ ಚಿಂತನ ಮಂಥನವನ್ನು ನಡೆಸುತ್ತವೆ.

ಟಿ.ಪಿ. ಅಶೋಕ (ಮುನ್ನುಡಿಯಿಂದ)

ಕುವೆಂಪು ಭಾಷಾಭಾರತಿ ಪ್ರಾಧಿಕಾರದ ೨೦೦೯ನೆಯ ಸಾಲಿನ ಅನುವಾದ ಪುರಸ್ಕಾರ ಪಡೆದ ಪುಸ್ತಕ
View full details

Customer Reviews

No reviews yet
0%
(0)
0%
(0)
0%
(0)
0%
(0)
0%
(0)