Kavya Kadame
ಮಾಕೋನ ಏಕಾಂತ
ಮಾಕೋನ ಏಕಾಂತ
Publisher - ಛಂದ ಪ್ರಕಾಶನ
- Free Shipping Above ₹350
- Cash on Delivery (COD) Available*
Pages - 110
Type - Paperback
Couldn't load pickup availability
ಮಾಕೋನ ಏಕಾಂತ
ತಮ್ಮ ಕವಿತೆ. ಕಾದಂಬರಿ ಹಾಗೂ ನಾಟಕಗಳಿಂದ ಈಗಾಗಲೇ ಪ್ರಸಿದ್ಧರಾಗಿರುವ, ಹಲವು ಪ್ರಶಸ್ತಿಗಳಿಂದ ಪುರಸ್ಕೃತರಾಗಿರುವ ಪ್ರತಿಭಾವಂತ ಯುವ ಲೇಖಕಿ ಕಾವ್ಯಾ ಕಡಮೆ ಅವರು 'ಮಾಕೋನ ಏಕಾಂತ' ಎಂಬ ಕಥಾ ಸಂಕಲನಕ್ಕೆ 2021ರ ಛಂದ ಪುಸ್ತಕ ಹಸ್ತಪ್ರತಿ ಸ್ಪರ್ಧೆಯಲ್ಲಿ 'ಛಂದ ಪುಸ್ತಕ ಬಹುಮಾನ' ವನ್ನು ಗಳಿಸಿದ್ದಾರೆ.
ಅವರ ಸಂಕಲನದಲ್ಲಿ ಎಂಟು ಕತೆಗಳಿವೆ. ವಿಭಿನ್ನ ಸಾಂಸ್ಕೃತಿಕ ಆವರಣಗಳಲ್ಲಿ ಅರಳಿರುವ ಈ ಕತೆಗಳು ಅನುಭವದ ತಾಜಾತನದಿಂದ, ಲವಲವಿಕೆಯ ನಿರೂಪಣೆಯಿಂದ, ಪ್ರಬುದ್ಧ ನಿರ್ವಹಣೆಯಿಂದ ಮನಮುಟ್ಟುತ್ತವೆ. ತೀರ್ಪು ಕೊಡುವ ಆತುರಕ್ಕೆ ಬೀಳದೆ ಮನುಷ್ಯ ಸ್ವಭಾವ ಮತ್ತು ಸಂಬಂಧಗಳ ಹಲವು ಆಯಾಮಗಳನ್ನು ಮುಕ್ತವಾಗಿ. ಸೂಕ್ಷ್ಮವಾಗಿ ಪರಿಶೀಲಿಸಿಕೊಳ್ಳುವ ವ್ಯವಧಾನ, ಉದಾರತೆ ಇಲ್ಲಿ ಕಾಣುತ್ತವೆ. ಜೀವನ ವೈಶಾಲ್ಯ-ವೈವಿಧ್ಯಗಳ ಬಗ್ಗೆ ಲೇಖಕಿ ಉಳಿಸಿಕೊಂಡಿರುವ ಬೆರಗು ಈ ಕತೆಗಳ ಸ್ಥಾಯೀ ಭಾವವಾಗಿದೆ. ಸಿದ್ಧ ಜಾಡನ್ನು ಬಿಟ್ಟು ಹೊಸ ಹೊಸ ಲೋಕಗಳನ್ನು ಅನ್ವೇಷಿಸುವ ದಿಟ್ಟತನ, ಕಾವ್ಯಕ್ಕೆ ಸಮೀಪವೆನ್ನಿಸುವಂಥ ಭಾಷಾ ಬಳಕೆ, ಕತೆಗಿಂತ ಕಥನಕ್ಕೆ ನೀಡಿರುವ ಪ್ರಾಮುಖ್ಯತೆಗಳಿಂದಾಗಿ ಈ ಬರಹಗಳು ವಿಶಿಷ್ಟವಾಗಿವೆ. ಕನ್ನಡೇತರ ಪರಿಸರಗಳಲ್ಲಿ ಸೃಷ್ಟಿಯಾಗುವ ಅನುಭವಗಳನ್ನು ಕನ್ನಡ ಭಾಷೆಯಲ್ಲಿ ಗ್ರಹಿಸಿ-ಅಭಿವ್ಯಕ್ತಿಸುವ ಮೂಲಕ ಕನ್ನಡ ಓದುಗರ ಭಾವಲೋಕಗಳನ್ನು ಹಿಗ್ಗಿಸುವಲ್ಲಿ ಲೇಖಕಿ ಸಾಕಷ್ಟು ಯಶಸ್ವಿಯಾಗಿದ್ದಾರೆ.
ಈ ಕತೆಗಳನ್ನು ಓದುತ್ತಿದ್ದಂತೆ ಹೊಸದೇನನ್ನೋ ಅನುಸಂಧಾನ ಮಾಡುತ್ತಿರುವ ಅನುಭವವಾಗುತ್ತದೆ.
-ಟಿ.ಪಿ.ಅಶೋಕ
Share

Subscribe to our emails
Subscribe to our mailing list for insider news, product launches, and more.