Manoj Rupada, To Kannada : Chandrashekar Madabhavi
ಮುರಿದ ಕಡಲು
ಮುರಿದ ಕಡಲು
Publisher - ಛಂದ ಪ್ರಕಾಶನ
- Free Shipping Above ₹350
- Cash on Delivery (COD) Available*
Pages - 188
Type - Paperback
Couldn't load pickup availability
ಈ ಕಾದಂಬರಿಯು ತೆರೆದಿಡುವ ಲೋಕ ಬಹುಕಾಲ ನಮ್ಮ ಮನಸ್ಸನ್ನು ಅಶಾಂತಗೊಳಿಸುತ್ತದೆ. ಗಾಢ ದುಃಖವೊಂದು ಆವರಿಸಿ ಒಲ್ಲೆ ಎಂಬುವವರನ್ನೂ ಬಿಡದೆ ವಿಚಾರದಾಳಕ್ಕೆ ಎಳೆಯುತ್ತದೆ. ಮುರಿದ ದೋಣಿಯನ್ನು ಹೇಗೋ ದುರಸ್ತಿ ಮಾಡಬಹುದು. ಕಡಲೇ ಮುರಿದರೆ?
ಈ ಕಾದಂಬರಿಯ ನಾಯಕ ನಾಯಕಿ ಖಳ ಎಲ್ಲವೂ ಒಂದೇ! ಅದು ಮಾನುಷ ನೀಚತನ. ಇಂತಹ ಮಾನುಷನೀಚತ್ವದ ಒಳಗನ್ನು ನೆಲ, ಕಾಡು, ನೀರು ಈ ಮೂರು ನೆಲೆಗಳಲ್ಲೂ ಸಂದರ್ಭಗಳನ್ನು ಸೃಷ್ಟಿಸಿಕೊಳ್ಳುತ್ತ ಕಾದಂಬರಿಯು ಬಗೆಯುತ್ತದೆ. ಜೀವಂತ ಮನುಷ್ಯ, ಜೀವಂತ ಪ್ರಾಣಿ, ಜೀವಂತ ವಸ್ತುವನ್ನು ಜೀವವಿರುವಾಗಲೇ ಒಡೆದು ಛಿದ್ರಗೊಳಿಸಿ ಆನಂದಿಸುವ ಮನುಷ್ಯ ಮತ್ತು ಇದು ವಿನಾಶಕಾರಿಯೆಂದು ತಿಳಿದೂ ಮೌನವಾಗಿ ಬೆಂಬಲಿಸುವ ಗುಂಪು ಎರಡೂ ಎಂದೂ ಇರುತ್ತವೆ. ಕೊನೆಗೆ ಉಳಿಯುವ ಸಂಕಟ - ತಮ್ಮ ಪಾಡಿಗೆ ಬದುಕುವ ಬಹುಜನರ ಗುಂಪು ಕೊನೆಗೂ ಒಂದು ಹಿಡಿ ನೀಚರ ಪ್ರತ್ಯಕ್ಷ ಯಾ ಪರೋಕ್ಷ ಅಧೀನದಲ್ಲೇ ಇದ್ದುಬಿಡುತ್ತದೆ ಎಂಬುದು.
ಆ ಚರಿತ್ರೆಯನ್ನೇ ಈ ಕಾದಂಬರಿ ಪ್ರಸ್ತುತದ ಮಾವೋವಾದಿ ಸಶಸ್ತ್ರ ನಕ್ಸಲ್ ಕ್ರಾಂತಿ, ನಿಶ್ಯಬ್ದವಾಗಿ ಜಗತ್ತನ್ನು ಹೀರುತ್ತಿರುವ ಹಿಡಿಯಷ್ಟು ಕಾರ್ಪೊರೇಟ್ ಪಿಪಾಸಿಗಳ ಸಂಚು, ಎಂದೂ ಸ್ವಹಿತದ ಆಚೆಗೆ ಯೋಚಿಸದ ರಾಜಕೀಯ ಈ ಮೂರೂ ಭಿತ್ತಿಗಳಲ್ಲಿ ಚಿತ್ರಿಸುತ್ತದೆ. ಇವು ಮೂರೂ ಭಾರತದ ಸಮಸ್ಯೆಗಳಾಗಿರುವಾಗಲೇ ಇಡೀ ವಿಶ್ವದ್ದೂ ಆಗಿರುವ ಕಹಿಸತ್ಯವನ್ನು ಮೂರು ಒಡೆಯುವ ರೂಪಕಗಳ ಮೂಲಕ ತಣ್ಣಗೆ ವಿವರಿಸುವ ವಿವರಣೆಯು ಇಂತಹ ಓದಿಗೆ ತೆರೆದುಕೊಳ್ಳದಿರುವವರೊಳಗೆ ಹೊಟ್ಟೆತೊಳಸು ಉಂಟು ಮಾಡಿದರೆ ಅನಿರೀಕ್ಷಿತವಲ್ಲ.
-ಲಲಿತಾ ಸಿದ್ಧಬಸವಯ್ಯ
Share

Subscribe to our emails
Subscribe to our mailing list for insider news, product launches, and more.