Skip to product information
1 of 1

Ram Kadam

ನಿಮ್ಮ ಮನೆಗೆ ನೀವೇ ಇಂಜಿನಿಯರ್

ನಿಮ್ಮ ಮನೆಗೆ ನೀವೇ ಇಂಜಿನಿಯರ್

Publisher - ಶ್ರೀನಿಧಿ ಪ್ರಕಾಶನ

Regular price Rs. 200.00
Regular price Rs. 200.00 Sale price Rs. 200.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 163

Type - Paperback

ನಿಮ್ಮ ಮನೆಗೆ ನೀವೇ ಇಂಜಿನಿಯರ್' ಶೀರ್ಷಿಕೆ ಹೊತ್ತ ಈ ಪುಸ್ತಕದಲ್ಲಿ ನಿವೇಶನದಿಂದ ಮೊದಲಾಗಿ ಮನೆಯನ್ನು ಕಟ್ಟಲು ಅಗತ್ಯವಿರುವ ಎಲ್ಲ ತರಹದ ಉಪಯುಕ್ತ ಮಾಹಿತಿಗಳನ್ನು ಅಚ್ಚುಕಟ್ಟಾಗಿ, ಸಾಮಾನ್ಯ ಜನರಿಗೂ ಅರ್ಥವಾಗುವಂತಹ ಸರಳವಾದ ಕನ್ನಡ ಭಾಷೆಯಲ್ಲಿ ರಾಮ್‌ ಕದಮ್‌ರವರು ಬರೆದಿದ್ದಾರೆ. ನನ್ನ ಬಹುಕಾಲದ ಪರಿಚಿತರಾದ ಇವರು ಕನ್ನಡ ಸಾರಸ್ವತ ಲೋಕಕ್ಕೆ ಒಂದು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೆಲವು ವಿಷಯಗಳು ಸಂಕ್ಷಿಪ್ತವಾಗಿವೆಯಾದರೂ ಅಗತ್ಯವಿರುವಷ್ಟು ವಿವರಣೆಯನ್ನು ಒಳಗೊಳ್ಳುವ ಮೂಲಕ 'ನಿಮ್ಮ ಮನೆಗೆ ನೀವೇ ಇಂಜಿನಿಯರ್' ಪರಿಪೂರ್ಣತೆ ಪಡೆದುಕೊಳ್ಳುವುದರಲ್ಲಿ ಸಫಲವಾಗಿದೆ.

ವಿಶ್ವದ ಕೆಲವು ದೇಶಗಳಲ್ಲಿ ಬಳಕೆಯಲ್ಲಿರುವ ಆಯ್ದ ಮನೆಗಳ ಮಾದರಿ ನಕಾಶೆಗಳೂ ಇದರಲ್ಲಿವೆ. ವಾಸ್ತುಶಾಸ್ತ್ರದ ಗೊಂದಲಗಳಿಗೆ ಆಧಾರ ಸಹಿತವಾದ ಸ್ಪಷ್ಟ ವಿವರಣೆಯಿದೆ. ವಿದ್ಯುತ್, ಪ್ಲಂಬಿಂಗ್ ಒಳಾಂಗಣಗಳ ವಿನ್ಯಾಸ, ತಾಂತ್ರಿಕ ಸಲಹೆ ಹೀಗೆ ಅನೇಕ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಒಟ್ಟಿನಲ್ಲಿ ಮನೆಯನ್ನು ಕಟ್ಟುವವರಿಗೆ ಅಗತ್ಯವಾದ ಎಲ್ಲ ಪೂರಕ ಮಾಹಿತಿಗಳು ಇಲ್ಲಿ ಸಮಗ್ರವಾಗಿ ಒಂದೇ ಪುಸ್ತಕದಲ್ಲಿ ನಿರೂಪಿಸಲಾಗಿದೆ.

'ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು' ಎಂಬ ಗಾದೆಯೊಂದಿದೆ. ಮದುವೆಯೇನೋ ಹಾಗೂ ಹೀಗೂ ಕೆಲವು ಚಿಕ್ಕಪುಟ್ಟ ಕೊರತೆಗಳ ನಡುವೆಯೂ ಮಾಡಿ ಮುಗಿಸಬಹುದು. ಆದರೆ ಮನೆಕಟ್ಟುವುದೆಂಬುದು ಹಾಗಲ್ಲ. ಅದು ಕಷ್ಟದ ಕೆಲಸ. ಎಲ್ಲವನ್ನೂ ತರ್ಕಬದ್ಧವಾಗಿ ಹೊಂದಿಸಬೇಕಾದ ಅನಿವಾರ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಸಿವಿಲ್ ಇಂಜಿನಿಯರಿಂಗ್‌ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವೃತ್ತಿಪರರಾದ ವಾಸ್ತುಶಿಲ್ಪಿಗಳು, ಇಂಜಿನಿಯರ್‌ಗಳು, ಗುತ್ತಿಗೆದಾರರು ಹಾಗೂ ತಮ್ಮ ಕನಸಿನ ಮನೆಯನ್ನು ಕಟ್ಟ ಬಯಸುವ ಸಜ್ಜನರೆಲ್ಲರಿಗೂ ಈ ಪುಸ್ತಕ ಅತ್ಯಂತ ಉಪಕಾರಿ.

View full details

Customer Reviews

Be the first to write a review
0%
(0)
0%
(0)
0%
(0)
0%
(0)
0%
(0)