Skip to product information
1 of 2

Harisha Hagalavadi

ಋಷ್ಯಶೃಂಗ

ಋಷ್ಯಶೃಂಗ

Publisher - ಛಂದ ಪ್ರಕಾಶನ

Regular price Rs. 160.00
Regular price Rs. 160.00 Sale price Rs. 160.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 136

Type - Paperback

Gift Wrap
Gift Wrap Rs. 15.00

ಡಿಯರ್ ಋಷ್ಯಶೃಂಗ...

ಈ ನಿನ್ನ ಕತೆಯೇನು ಮಾರಾಯ? ಮರುಳಿಗೂ ಮೆಥಡುಂಟೆಂದು ಅಂದಕೊಂಡವನು ನಾನು. ಹಾಗಂದುಕೊಂಡ ಮೂಢನೇ ನಾನಿರಬಹುದು, ನಿನ್ನ ಈ ಹೊಸಕತೆಯನ್ನು ಓದಿದಾಗ ನಿನಗೊಂದು ನಿಗದಿಯ ಮೆಥಡೇ ಇಲ್ಲವೆಂದು ಅನಿಸಿಬಿಟ್ಟಿತಲ್ಲ, ಗುರೂ, ಇದಕ್ಕೇನನ್ನಲಿ? ಕಂಗೆಟ್ಟೆ. ಕೆಲವೊಮ್ಮೆ ಕಂಗಾಲಾದೆ. ಇಷ್ಟಿದ್ದೂ, ನಾನೆಣಿಸಿದ ನಿಗದಿ ನಿಖರತೆಯೆಲ್ಲ ನಿನ್ನಂಥವರಿಗಲ್ಲವೆಂಬುದು, ಕಡೆಗೆ, ನನಗೆ ನಾನೇ ಅಂದುಕೊಂಡ ಮೆಥಡು.

ಇರಲಿ. ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು. ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವೆಗಣಿಯಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು.

ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. 'ವಿ ಸ್ಟಾರ್ಟ್ ಕನ್ಸೂ ಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಪ್ಲೆಕ್ಸಿನಂತೆ ಅನಿಸಿದ್ದು-'ವಾಟ್ ಇಫ್ ಇಟ್ ಕನ್ಸೂ ಮ್ಸ್ ದಿ ಸೆಲ್ಸ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್.

ಒಂದಷ್ಟು ಚಿಯರುಗಳು.

-ನಾಗರಾಜ ವಸ್ತಾರೆ

 

View full details