Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ
Publisher -
- Free Shipping Above ₹250
- Cash on Delivery (COD) Available
Pages - 167
Type - Paperback
Couldn't load pickup availability
ಡಾ.ಆರ್.ಗಣೇಶ್, ಒಬ್ಬ ಅವಧಾನಿ. ಕನ್ನಡದಲ್ಲಿ ಅವಧಾನ ಕಲೆಯನ್ನು ಪ್ರಚುರಗೊಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಿರಿಯ ಸಾಧನೆ ಮಾಡಿರುವ ಗಣೇಶ್ “ಕನ್ನಡದಲ್ಲಿ ಅವಧಾನ ಕಲೆ” ಎಂಬ ತಮ್ಮ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ತನ್ನ ಪ್ರಪ್ರಥಮ ಡಿ.ಲಿಟ್. ಪದವಿಯನ್ನು ನೀಡಿ ಗೌರವಿಸಿದೆ. ಪ್ರಸ್ತುತ, ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿ ದುಡಿಯುತ್ತಿದ್ದಾರೆ.
ಇದುವರೆವಿಗೂ ಸುಮಾರು ಮುನ್ನೂರಕ್ಕೂ ಹೆಚ್ಚು ಕನ್ನಡ ಅಷ್ಟಾವಧಾನಗಳು, ಹಾಗೂ ಮೂರು ಕನ್ನಡ ಶತಾವಧಾನಗಳನ್ನು ಯಶಸ್ವಿಯಾಗಿ ನಡೆಸಿರುವ ಗಣೇಶ್, ಇದೀಗ ತಮ್ಮ ಸಹಸ್ರಾವಧಾನಕ್ಕೂ ಸಿದ್ಧರಾಗುತ್ತಿದ್ದಾರೆ. ಅಲ್ಲದೆ ಸೋದರ ಭಾಷೆಗಳಾದ ತೆಲುಗು, ತಮಿಳಿನಲ್ಲಿ ಹಾಗೂ ಸಂಸ್ಕೃತದಲ್ಲಿ ಅಷ್ಟಾವಧಾನ ನಡೆಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಈ ರೀತಿಯಾಗಿ ನಾಲ್ಕು ಭಾಷೆಗಳಲ್ಲಿಯೂ ಅವಧಾನವನ್ನು ನಡೆಸಿರುವ ಹೆಗ್ಗಳಿಕೆ ಇವರದ್ದು. ಸಂಸ್ಕೃತ ಹಾಗೂ ತೆಲುಗಿನಲ್ಲಿಯೂ ಸಹಾ ಶತಾವಧಾನಗಳನ್ನು ಪೂರೈಸಿರುವುದು ಇವರ ಪ್ರತಿಭೆಗೆ ಸಾಕ್ಷಿ; ಹಾಗೂ ಈ ರೀತಿಯ ಸಾಧನೆ ಮಾಡಿರುವ ಏಕೈಕ ಭಾರತೀಯ.
Share


Subscribe to our emails
Subscribe to our mailing list for insider news, product launches, and more.