H. N. Nagamohandas
Publisher - ನವಕರ್ನಾಟಕ ಪ್ರಕಾಶನ
Regular price
Rs. 120.00
Regular price
Rs. 120.00
Sale price
Rs. 120.00
Unit price
per
Shipping calculated at checkout.
- Free Shipping above ₹1,000
- Cash on Delivery (COD) Available
Pages -
Type -
Couldn't load pickup availability
ಸಂವಿಧಾನ ಮತ್ತು ವಚನಗಳು
ಕರ್ನಾಟಕದಲ್ಲಿ 'ಸಂವಿಧಾನ ಓದು' ಎಂಬ ಆಂದೋಲನವನ್ನೇ ಆರಂಭಿಸಿ, ವಿವಿಧ ನಗರಗಳಲ್ಲಿ ಸಂಚರಿಸಿ ಭಾರತದ ಸಂವಿಧಾನದ ಆಶಯಗಳನ್ನು ಮನೆ-ಮನಗಳಿಗೆ, ಶಾಲಾ-ಕಾಲೇಜುಗಳಿಗೆ ತಲುಪಿಸುವ ಮಹತ್ವದ ಕೆಲಸವನ್ನು ನ್ಯಾಯಮೂರ್ತಿ ಶ್ರೀ ಹೆಚ್. ಎಸ್. ನಾಗಮೋಹನದಾಸ್ ಅವರು ಮಾಡುತ್ತಿದ್ದಾರೆ. ಪ್ರಸ್ತುತ ಸಂವಿಧಾನ ಮತ್ತು ವಚನಗಳು' ಕೃತಿಯಲ್ಲಿ ಸಂವಿಧಾನದ ಮೂಲ ಆಶಯಗಳು ಜನಪರವಾದ ತತ್ವಶಾಸ್ತ್ರೀಯ ಚಿಂತನೆಗಳಲ್ಲೂ ಹೇಗೆ ಪ್ರತಿಪಾದನೆಗೊಂಡಿವೆ ಎಂಬ ಅಂಶವನ್ನು ತಮ್ಮ ಆಳವಾದ ಅಧ್ಯಯನ, ವಿಶ್ಲೇಷಣೆಯ ಮೂಲಕ ಸಾದರಪಡಿಸಿದ್ದಾರೆ. ವಿಶ್ವದ ಮತ್ತು ಭಾರತೀಯ ಪರಂಪರೆಯಲ್ಲಿ ಜೀವಪರ ಚಿಂತನೆಗಳು ಜೀವ ವಿರೋಧಿ ಚಿಂತನೆಗಳ ವಿರುದ್ಧ ಸದಾ ಸೆಣಸುತ್ತಲೇ ಬಂದಿವೆ. ಅಂಥ ಕೆಲವು ತಾತ್ವಿಕ ಧಾರೆಗಳನ್ನು ಪ್ರಸ್ತಾಪಿಸುತ್ತ ೧೨ನೇ ಶತಮಾನದ ಬಸವಣ್ಣ ಮತ್ತು ಎಲ್ಲ ಶರಣರ ವಚನಗಳಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರು ರಚಿಸಿದ ಭಾರತ ಸಂವಿಧಾನದ ಆಶಯಗಳು ಹೇಗೆ ವ್ಯಕ್ತವಾಗಿವೆ ಎಂಬುದನ್ನು ವಚನಗಳನ್ನಾಧರಿಸಿ, ತುಲನಾತ್ಮಕವಾಗಿ ಈ ಕೃತಿಯಲ್ಲಿ ಮಂಡಿಸಿದ್ದಾರೆ, ಬುದ್ಧ, ಬಸವ, ಇತರ ವಚನಕಾರರು ಮತ್ತು ಡಾ| ಬಿ. ಆರ್. ಅಂಬೇಡ್ಕರ್ ಅವರುಗಳು ಸಮಕಾಲೀನರಲ್ಲವಾದರೂ ಅವರೆಲ್ಲರಲ್ಲಿ 'ಜೀವ ಕೇಂದ್ರಿತ', 'ಮನುಷ್ಯ ಕೇಂದ್ರಿಕೆ' ತುಡಿತಗಳು, ಚಿಂತನೆಗಳು ಹೇಗೆ ಸಮಾನ ಆಶಯಗಳನ್ನು ಹೊಂದಿವೆ ಎಂಬುದನ್ನು ಈ ಕೃತಿಯಲ್ಲಿ ನೋಡಬಹುದು. ವಚನ ಚಳುವಳಿ ಮತ್ತು ಭಾರತದ ಸಂವಿಧಾನ ಪ್ರತಿಪಾದಿಸಿದ ಮಾನವೀಯ ಸಮಾಜದ ನಿಯಮಗಳು, ಆದರ್ಶಗಳು, ಹಕ್ಕು ಮತ್ತು ಕರ್ತವ್ಯಗಳು ಇಂದಿನ ಸಂಘರ್ಷಮಯ ಸಮಾಜಕ್ಕೆ ದಿಕ್ಸೂಚಿಗಳಾಗಿವೆ. ಅಂಥ ದಿಕ್ಸೂಚಿಯನ್ನು ಈ ಕೃತಿ ಒಳಗೊಂಡಿದೆ.
ಸನ್ಮಾನ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ನ್ಯಾಯವಾದಿಗಳಾಗಿ, ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದವರು, ಈಗ ವಿಶ್ರಾಂತ ಬದುಕನ್ನು ನಡೆಸಬೇಕಾದ ಸಂದರ್ಭದಲ್ಲಿ ಅವಿಶ್ರಾಂತವಾಗಿ ಸಾಮಾಜಿಕ ಜಾಗೃತಿ ಕೆಲಸದಲ್ಲಿ ನಿರತರಾಗಿದ್ದಾರೆ. ನಮ್ಮ ಸಂವಿಧಾನವೇ ಸ್ವಾತಂತ್ರೋತ್ತರ ಭಾರತದ ವಿಕಾಸಕ್ಕೆ ಕಾರಣ ಎಂದು ಸದಾ ಪ್ರತಿಪಾದಿಸುವ ಶ್ರೀ ನಾಗಮೋಹನದಾಸ್ ಅವರು ಆಡಳಿತ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಂವಿಧಾನದ ಆಶಯಗಳ ಜಾರಿ ಮತ್ತು ಸಂವಿಧಾನದ ರಕ್ಷಣೆಗಾಗಿ ಇಳಿ ವಯಸ್ಸಿನಲ್ಲಿಯೂ ನಿರಂತರ ಶ್ರಮಿಸುತ್ತಿರುವ ಅಪರೂಪದ ನ್ಯಾಯಮೂರ್ತಿ, ಅವರ ಈ ಕೃತಿ 'ಸಂವಿಧಾನ ಮತ್ತು ವಚನಗಳು' ನಾಡಿನ ಮನೆ - ಮನ ತಲುಪಲಿ.
– ಡಾ| ಸಿದ್ದನಗೌಡ ಪಾಟೀಲ