Skip to product information
1 of 2

Dr. Suryanarayana Sharma. P. M.

ವೈದ್ಯಕೀಯ ಕ್ಷೇತ್ರದಲ್ಲಿನ ನೂತನ ತಂತ್ರಜ್ಜಾನಗಳು

ವೈದ್ಯಕೀಯ ಕ್ಷೇತ್ರದಲ್ಲಿನ ನೂತನ ತಂತ್ರಜ್ಜಾನಗಳು

Publisher - ಸಾಹಿತ್ಯ ಲೋಕ ಪ್ರಕಾಶನ

Regular price Rs. 580.00
Regular price Rs. 580.00 Sale price Rs. 580.00
Sale Sold out
Shipping calculated at checkout.

- Free Shipping Above ₹350

- Cash on Delivery (COD) Available*

Pages - 176

Type - Paperback

Gift Wrap
Gift Wrap Rs. 15.00

"ಇಪ್ಪತ್ತೊಂದನೇ ಶತಮಾನದಲ್ಲಿ ಜಗತ್ತಿನ ಎಲ್ಲ ಕ್ಷೇತ್ರಗಳಲ್ಲಿಯೂ ತಂತ್ರಜ್ಞಾನ ಹಾಸುಹೊಕ್ಕಾಗಿದೆ. ಇದಕ್ಕೆ ವೈದ್ಯಕೀಯ ಕ್ಷೇತ್ರವೂ ಹೊರತಲ್ಲ. ಪ್ರತಿಯೊಂದು ಶಸ್ತ್ರಚಿಕಿತ್ಸೆಗೆ ದೇಶದ ಶ್ರೀಮಂತರು ಮತ್ತು ರಾಜಕಾರಣಿಗಳು ಪಾಶ್ಚಿಮಾತ್ಯ ರಾಷ್ಟ್ರಗಳ ಆಸ್ಪತ್ರೆಗಳನ್ನು ಆಶ್ರಯಿಸುವ ಕಾಲವೊಂದಿತ್ತು. ಕಳೆದೆರಡು ದಶಕದಲ್ಲಿ ದೇಶದ ವೈದ್ಯಕೀಯ ಕ್ಷೇತ್ರದಲ್ಲಿ ಅಗಾಧ ಬದಲಾವಣೆಗಳಾಗಿವೆ. ಇದಕ್ಕೆ ಆಧುನಿಕ ತಂತ್ರಜ್ಞಾನದ ಅಳವಡಿಕೆಯೇ ಮೂಲ ಕಾರಣವೆಂದರೆ ತಪ್ಪಾಗಲಾರದು.

ಈಗ ದೇಶದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡೂ ತಂತ್ರಜ್ಞಾನದ ಸಹಾಯದಿಂದ ಪಾಶ್ಚಿಮಾತ್ಯ ರಾಷ್ಟ್ರಗಳ ಯಾವುದೇ ಅತ್ಯಾಧುನಿಕ ಆಸ್ಪತ್ರೆಗಳಿಗೆ ಸಡ್ಡು ಹೊಡೆಯುವ ಮಟ್ಟಿಗೆ ಬೆಳೆದು ನಿಂತಿವೆ. ತಂತ್ರಜ್ಞಾನವು ವೈದ್ಯಕೀಯ ಕ್ಷೇತ್ರದ ವಿವಿಧ ಶಾಖೆಗಳಲ್ಲಿ ಇಂದು ವೈದ್ಯರಿಗೆ, ರೋಗಿಗಳಿಗೆ, ಸಾರ್ವಜನಿಕರಿಗೆ ಮತ್ತು ಸಮುದಾಯಕ್ಕೆ ಯಾವ ರೀತಿ ಸಹಾಯ ಮಾಡುತ್ತದೆ ಎಂಬುದನ್ನು ಕುರಿತು ಅಪೋಲೋ ಆಸ್ಪತ್ರೆಯ ಹಿರಿಯ ನರರೋಗ ತಜ್ಞ ಹಾಗೂ ವೈದ್ಯ ಸಾಹಿತಿ ಡಾ. ಸೂರ್ಯನಾರಾಯಣ ಶರ್ಮರವರು ಈ ಮಾಹಿತಿಪೂರ್ಣ ಕೃತಿಯನ್ನು ಹೊರತಂದಿದ್ದಾರೆ.

ಆಸ್ಪತ್ರೆಯ ತಮ್ಮ ಸಹೋದ್ಯೋಗಿ ವೈದ್ಯರ ಪರಿಣಿತಿಯ ಕ್ಷೇತ್ರದಲ್ಲಿ ಅವರ ಅನುಭವದ ಮೂಸೆಯಿಂದ ಹೊರಬಂದ ಮಾಹಿತಿಯನ್ನು ಕನ್ನಡ ಭಾಷೆಯಲ್ಲಿ ಸುಂದರವಾಗಿ ಎಲ್ಲರಿಗೂ ಅರ್ಥವಾಗುವಂತೆ ತಿಳಿಸಿ ಹೇಳಿದ್ದಾರೆ. ವೈದ್ಯಕೀಯ ಕ್ಷೇತ್ರಕ್ಕೆ ಮತ್ತು ಕನ್ನಡ ಸಾಹಿತ್ಯಕ್ಕೆ ಏಕಕಾಲದಲ್ಲಿ ಕೊಡುಗೆ ಸಲ್ಲಿಸಿದ ಡಾ. ಸೂರ್ಯನಾರಾಯಣ ಶರ್ಮ ಮತ್ತು ಅವರ ವೈದ್ಯರ ತಂಡ ಹಾಗೂ ಇದಕ್ಕೆ ಬೆಂಬಲ ನೀಡಿದ ಅಪೋಲೋ ಆಸ್ಪತ್ರೆ ಬನ್ನೇರುಘಟ್ಟ ರಸ್ತೆ ಬೆಂಗಳೂರು ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ವೈದ್ಯಕೀಯ ಕ್ಷೇತ್ರದಲ್ಲಿ ನಡೆಯುವ ಕ್ರಾಂತಿಕಾರಕ ಬದಲಾವಣೆಗಳನ್ನು ತಿಳಿದುಕೊಳ್ಳುವುದು ಸಾರ್ವಜನಿಕರ ಆದ್ಯತೆ ಆಗಿರಬೇಕು. ಇದರಿಂದಾಗಿ ನೂರಾರು ಜೀವಗಳನ್ನು ಉಳಿಸಬಹುದು. ಕನ್ನಡ ಭಾಷೆಯ ಸಹೃದಯಿ ಓದುಗರು ಈ ಕೃತಿಯನ್ನು ಓದಿ ತಮ್ಮ ಜ್ಞಾನದ ವಿಸ್ತಾರವನ್ನು ಹಿಗ್ಗಿಸಿಕೊಳ್ಳಲೆಂದು ಆಶಿಸುತ್ತೇನೆ."

-ಡಾ. ಸಿ.ಎನ್. ಮಂಜುನಾಥ್

ಪದ್ಮಶ್ರೀ ಪುರಸ್ಕೃತ ಹಿರಿಯ ಹೃದ್ರೋಗ ತಜ್ಞರು, ಸಂಸದರು, ಬೆಂಗಳೂರು ಗ್ರಾಮಾಂತರ ಲೋಕಸಭ

View full details